ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಅಭಿನಂದನಾ ಸಮಾರಂಭ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ವರ್ಷಂಪ್ರತಿ ಜರುಗುವ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆಯು ಜೂ.9 ರಂದು ನಡೆಯಿತು.

ಬೆಳಗ್ಗೆ ಅರ್ಚಕರಾದ ಕೃಷ್ಣ ಭಟ್ ಮತ್ತು ಅಭಿರಾಮ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹವನವಾಗಿ ಶ್ರೀ ಸತ್ಯನಾರಾಯಣ ದೇವರ ಪೂಜೆಯುಆರಂಭಗೊಂಡಿತು.

ಈ ಸಂದರ್ಭದಲ್ಲಿ ವಿಶೇಷವಾಗಿ ಭಜನಾ ಮಂದಿರದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ‌ ಸಂತರ್ಪಣೆಯು ನಡೆಯಿತು.

ಈ ಸಂದರ್ಭದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆದ ಭಜನಾ ಮಂದಿರದ ಸುವರ್ಣ ಮಹೋತ್ಸವಕ್ಕೆ ಸಹಕರಿಸಿದವರನ್ನು ಸುವರ್ಣ ಮಹೋತ್ಸವ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಗೌರವಾಧ್ಯಕ್ಷ ಉದ್ಯಮಿ ಕೃಷ್ಣ ಕಾಮತ್ ಅರಂಬೂರು,
ಅರ್ಚಕ ಕೃಷ್ಣ ಭಟ್, ನಿವೃತ್ತ ಶಿಕ್ಷಕ ದಿವಾಕರ ನಾಯಕ್, ನಿವೃತ್ತ ಸೈನಿಕ ನಾರಾಯಣ ನಾಯ್ಕ್ ಅರಂಬೂರು, ಭಜನಾ ಮಂದಿರದ ಅಧ್ಯಕ್ಷ ರತ್ನಾಕರ ರೈ ಅರಂಬೂರು, ಕಾರ್ಯಾಧ್ಯಕ್ಷ ಉದ್ಯಮಿ ಕೃಷ್ಣಪ್ಪಕೆಅರಂಬೂರು,ಕುಂಞರಾಮನ್ ಶ್ರೀ ಶೈಲಂ,ಸಮಿತಿಕಾರ್ಯದರ್ಶಿಬಂಗಾರುಭಾರದ್ವಾಜ್, ಶ್ರೀಮತಿ ಹಾರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಭಜನಾ ಮಂದಿರದ ಪದಾಧಿಕಾರಿಗಳು ಮತ್ತು ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಪದಾಧಿಕಾರಿಗಳು ‌ಮತ್ತು ಸದಸ್ಯರು ಸಹಕರಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದರು.