ಪ್ರಧಾನಿಯಾಗಿ ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಮಾಣವಚನ ಸ್ವೀಕಾರ ಹಿನ್ನೆಲೆ

0

ಚೆಂಬು ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಸತತ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿ, ಹ್ಯಾಟ್ರಿಕ್ ಸಾಧಿಸಿದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದ ಬಾಲಂಬಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೂ.9ರಂದು ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀನಿವಾಸ ನಿಡಿಂಜಿ ಸೇರಿದಂತೆ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.