ಕೊಡಗು ಸಂಪಾಜೆಯಲ್ಲಿ ಭಾ.ಜ.ಪ. ಕಾರ್ಯಕರ್ತರಿಂದ ವಿಜಯೋತ್ಸವ
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ಚುನಾಯಿತಗೊಂಡು, ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಅಧಿಕಾರ ಬಂದ ಹಿನ್ನೆಲೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ನಾಯಕ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೂ.9ರಂದು ರಾತ್ರಿ ವಿಜಯೋತ್ಸವ ಆಚರಿಸಿದರು.








ಕೊಡಗು ಸಂಪಾಜೆಯನ್ನೊಳಗೊಂಡ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಕೊಡಗು ಸಂಪಾಜೆ ಬೂತ್ ನಿಂದ ಮುನ್ನಡೆ ದೊರೆತಿದ್ದು, ಬಿಜೆಪಿ ಕಾರ್ಯಕರ್ತರು ಹರ್ಷಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಕೊಡಗು ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ ಸೇರಿದಂತೆ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.









