ಕನಕಮಜಲು: ಕೋಡಿ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

0

ಸಿಲಿಂಡರಿಂದ ಸೋರಿಕೆಯಾಗುತ್ತಿರುವ ಗ್ಯಾಸ್ – ರಸ್ತೆ ಸಂಚಾರ ಅಸ್ತವ್ಯಸ್ಥ

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿಯಾಗಿ ಸಿಲಿಂಡರ್ ನಿಂದ ಗ್ಯಾಸ್ ಸೋರೆಯಾಗುತ್ತಿದ್ದು, ಹೆದ್ದಾರಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ಜೂ.10ರಂದು ಸಂಜೆ ಸಂಭವಿಸಿದೆ.

ಮಡಿಕೇರಿ ಕಡೆಯಿಂದ ಮಂಗಳೂರಿಗೆ ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಲಾರಿ ಜೋರಾಗಿ ಸುರಿಯುವ ಮಳೆಯ ಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುವುದಾಗಿ ತಿಳಿದುಬಂದಿದೆ. ಇದೀಗ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ.