ಬಹುಬೇಡಿಕೆಯಾದ ತೊಡಿಕಾನದ ಬಿ.ಎಸ್.ಎನ್.ಎಲ್. ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಸಂಸದರನ್ನು ಭೇಟಿಯಾದ ಸ್ಥಳೀಯ ಜನಪ್ರತಿನಿಧಿಗಳ ನಿಯೋಗ

0

ಅರಂತೋಡು – ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ನಿಯೋಗದಿಂದ ಸಂಸದ ಬ್ರಿಜೇಶ್ ಚೌಟ ಭೇಟಿ

ಬಿ‌.ಎಸ್‌.ಎನ್.ಎಲ್. 4G ನೆಟ್ವರ್ಕ್ ಹಾಗೂ ಟವರಿಗೆ ಹೊಸ ಬ್ಯಾಟರಿ ಒದಗಿಸುವ ಭರವಸೆ ನೀಡಿರುವ ಸಂಸದರು

ತೊಡಿಕಾನ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಬಿ.ಎಸ್.ಎನ್.ಎಲ್. ನೆಟ್ವರ್ಕ್ ಸಮಸ್ಯೆ ಪರಿಹಾರ ಕುರಿತಂತೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನೇತೃತ್ವದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ನಿಯೋಗವು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಅವರನ್ನು ಜೂ.12ರಂದು ಸಂಜೆ ಮಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದರು.

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ, ದೇವರಗುಂಡಿ ಜಲಪಾತ ಹೊಂದಿರುವ ತೊಡಿಕಾನ ಪರಿಸರದಲ್ಲಿ ಕಳೆದ ಎಂಟು ವರ್ಷಗಳಿಂದ ಬಿ.ಎಸ್.ಎನ್.ಎಲ್. ಮೊಬೈಲ್ ನೆಟ್ವರ್ಕ್ ಸಮಸ್ಯೆ ಪದೇ ಪದೇ ಕಾಡುತ್ತಿದ್ದು, ಈ ಬಗ್ಗೆ ಸ್ಥಳೀಯ ನಾಗರಿಕರು ಹಲವು ಹೋರಾಟ ಮಾಡಿದ್ದು, ಇದುವರೆಗೂ ಯಾವುದೇ ಸ್ಪಂದನೆ ದೊರೆತಿಲ್ಲ.

ನೆಟ್ವರ್ಕ್ ಸಮಸ್ಯೆಯಿಂದಾಗಿ ದೇವಸ್ಥಾನಕ್ಕೆ ಹಾಗೂ
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ, ಸ್ಥಳೀಯ ಅಂಚೆಕಛೇರಿ, ಶಾಲೆ , ಬ್ಯಾಂಕ್ ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಲಾಗಿತ್ತು.

ಈ ಕುರಿತಂತೆ ಜೂ.12ರಂದು ಶಾಸಕಿ ಭಾಗೀರಥಿ ಮುರುಳ್ಯ ಅವರೊಂದಿಗೆ ಮಂಗಳೂರಿಗೆ ಭೇಟಿ ನೀಡಿದ ಅರಂತೋಡಿನ ಜನಪ್ರತಿನಿಧಿಗಳ ನಿಯೋಗದ ಮನವಿಗೆ ಸ್ಪಂದಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ತೊಡಿಕಾನದ ನೆಟ್ವರ್ಕ್ ಸಮಸ್ಯೆ ಪರಿಹಾರದ ಕುರಿತಂತೆ ಮುಂದಿನ ದಿನಗಳಲ್ಲಿ ಆದಷ್ಟು ಶೀಘ್ರವಾಗಿ ಬಿ.ಎಸ್.ಎನ್.ಎಲ್. ಅಧಿಕಾರಿಗಳ ಸಭೆ ನಡೆಸಿ, ಆದ್ಯತೆಯ ಮೇರೆಗೆ ಬಿ.ಎಸ್.ಎನ್.ಎಲ್. 4G ನೆಟ್ವರ್ಕ್ ಮತ್ತು ಟವರ್ ಗೆ ಹೊಸ ಬ್ಯಾಟರಿ ಒದಗಿಸುವ ಕುರಿತು ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಅರಂತೋಡು ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಉಪಾಧ್ಯಕ್ಷೆ ಶ್ರೀಮತಿ ಭವಾನಿ ಚಿಟ್ಟನ್ನೂರು, ಅರಂತೋಡು – ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ಸುಳ್ಯ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸಹಕಾರಿ ಸಂಘದ ನಿರ್ದೇಶಕ ವಿಜೇತ್ ಮರುವಳ ಉಪಸ್ಥಿತರಿದ್ದರು.