ಕೊಕ್ಕೊ ಕೊಯ್ಯುತ್ತಿದ್ದಾಗ ಬಿದ್ದು ಗಂಭೀರ ಗಾಯ

0

ಚಿಕಿತ್ಸೆ ಫಲಿಸದೇ ಮೃತಪಟ್ಟ ಕೃಷಿಕೆ

ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸದಸ್ಯ ವೇಣುಗೋಪಾಲ ತುಂಬೆತ್ತಡ್ಕರವರಿಗೆ ಮಾತೃವಿಯೋಗ

ಕೊಕ್ಕೊ ಕೊಯ್ಯುತ್ತಿದ್ದಾಗ ಆಯ ತಪ್ಪಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷಿಕೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮದ ತುಂಬೆತ್ತಡ್ಕ ಐತ್ತಪ್ಪ ನಾಯ್ಕ ಎಂಬವರ ಪತ್ನಿ ಸರಸ್ವತಿ (59) ಎಂಬವರೇ ಮೃತ ಮಹಿಳೆ.

ಸರಸ್ವತಿಯವರು ಸ್ಥಳೀಯವಾಗಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮೂರು ವಾರದ ಹಿಂದೆ ಕೆಲಸಕ್ಕೆ ಹೋಗಿದ್ದ ವೇಳೆ ಕೊಕ್ಕೊ ಕೊಯ್ಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದಿದ್ದರು. ಪರಿಣಾಮ ಇವರ ಬೆನ್ನುಹುರಿಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೆಲದಿನಗಳಿಂದ ಅವರು ಚಿಕಿತ್ಸೆಗೆ ಸ್ಪಂದಿಸದೇ ಇದ್ದ ಕಾರಣ ಇಂದು ಸರಸ್ವತಿಯವರನ್ನು ಮನೆಗೆ ಕರೆತಂದರು. ಈ ಸಂದರ್ಭ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದರು.

ಮೃತರು ಪತಿ, ಪುತ್ರ ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸದಸ್ಯ ವೇಣುಗೋಪಾಲ ತುಂಬೆತ್ತಡ್ಕ, ಪುತ್ರಿಯರಾದ ಹಿಮಾವತಿ, ಕೃಷ್ಣವೇಣಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.