ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ “Wisdom bite on inspiration” ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಡಾ. ಉಜ್ವಲ್ ಯು.ಜೆ ಸುಮಾರು 35ಕ್ಕೂ ಹೆಚ್ಚಿನ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ಕುರಿತು ಮಾಹಿತಿ ನೀಡುತ್ತಾ ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಬೇಕು ಮತ್ತು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು. ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಡಾ. ನಾರಾಯಣ ಶೇಡಿಕಜೆ ವಿದ್ಯಾರ್ಥಿಗಳು ಹೇಗೆ ಪರೀಕ್ಷೆಗಳನ್ನು ಎದುರಿಸಬೇಕು, ಪೂರ್ವಭಾವಿ ತಯಾರಿಗಳನ್ನು ಹೇಗೆ ಮಾಡಬೇಕು ಮತ್ತು ಹೆತ್ತವರು ಈ ನಿಟ್ಟಿನಲ್ಲಿ ನಿರ್ವಹಿಸಬಹುದಾದ ಜವಾಬ್ದಾರಿಗಳನ್ನು ಮನದಟ್ಟು ಮಾಡಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ ಸಿ.ಟಿ ವಂದಿಸಿದರು. ಶ್ರೀಮತಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ
ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ, ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.