ಎನ್‌ಎಂಸಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

0

ವಿದ್ಯೆ ಕಲಿಕೆಯೊಂದಿಗೆ ಸಮಾಜ ಸೇವೆಯಲ್ಲಿ ಗುರುತಿಸಿಕೊಳ್ಳಿ: ಪಿ.ಬಿ. ಸುಧಾಕರ್ ರೈ

ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಯೂತ್ ರೆಡ್ ಕ್ರಾಸ್ ನೆಹರು ಮೆಮೋರಿಯಲ್ ಕಾಲೇಜು, ಜೂನಿಯರ್ ರೆಡ್ ಕ್ರಾಸ್ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ ಜೂನ್ 14 ರಂದು ವಿಶ್ವ ರೆಡ್ ಕ್ರಾಸ್ ದಿನಾಚರಣೆ ಮತ್ತು ವಿಶ್ವ ರಕ್ತ ದಾನಿಗಳ ದಿನಾಚರಣೆ ಕಾರ್ಯಕ್ರಮ ಸುಳ್ಯ ಎನ್ ಎಂ ಸಿ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ರೆಡ್ ಕ್ರಾಸ್ ಸುಳ್ಯ ಇದರ ಸಭಾಪತಿ ಪಿ ಬಿ ಸುಧಾಕರ್ ರೈ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆ ಕಲಿಕೆಯೊಂದಿಗೆ ಸಮಾಜ ಸೇವೆಯಲ್ಲಿ ಕೂಡ ಭಾಗವಹಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ರಕ್ತದಾನ ಮಾಡುವ ಮೂಲಕ ನೂರಾರು ಜೀವಗಳನ್ನು ರಕ್ಷಿಸುವ ಕೆಲಸಗಳು ನಮ್ಮಿಂದ ಆಗಬೇಕಾಗಿದೆ. ವಿದ್ಯಾಭ್ಯಾಸ ಮುಗಿಸಿದ ಬಳಿಕ ಉನ್ನತ ಮಟ್ಟದ ಉದ್ಯೋಗದಲ್ಲಿ ಸೇರ್ಪಡೆಗೊಳ್ಳಲು ಕೇವಲ ಪಾಠ ಪುಸ್ತಕ ಮಾತ್ರವಲ್ಲದೆ ನಮ್ಮ ಸಮಾಜ ಸೇವೆಯು ಕೂಡ ಅಲ್ಲಿ ಪರಿಗಣಿಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವವನ್ನು ಕೊಡುವ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ಥಳೀಯ ಕಾಲೇಜಿನ ರಾಜ್ಯಪಾಲ ಡಾ. ರುದ್ರಪ್ರಸಾದ್ ಎಂ ಎಂ ಈ ಸಂದರ್ಭದಲ್ಲಿ ಮಾತನಾಡಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದರು.


ವೇದಿಕೆಯಲ್ಲಿ ಸುಳ್ಯ ವರ್ತಕರ ಸಂಘದ ಉಪಾಧ್ಯಕ್ಷ, ರಕ್ತ ದಾನಿ ಸಿ ಎ ಗಣೇಶ್ ಭಟ್, ಯೂತ್ ರೆಡ್ ಕ್ರಾಸ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಸಂಜೀವ ಕುತ್ಪಾಜೆ, ನೆಹರು ಮೆಮೋರಿಯಲ್ ಕಾಲೇಜಿನ ರೆಡ್ ಕ್ರಾಸ್ ಘಟಕಾಧಿಕಾರಿ ಶ್ರೀಮತಿ ಗೀತಾ ಎಸ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜಾಕೆಟ್ ವಿತರಣೆ ಕಾರ್ಯಕ್ರಮ ನಡೆಯಿತು.
ಎನ್‌ಎಸ್‌ಎಸ್ ಕಾರ್ಯದರ್ಶಿ ವಿದ್ಯಾರ್ಥಿನಿ ರಕ್ಷಿತಾ ಕೆ ಕಾರ್ಯಕ್ರಮವನ್ನು ನಿರೂಪಿಸಿ ಯುವ ರೆಡ್ ಕ್ರಾಸ್ ಘಟಕದ ಕಾಲೇಜು ವಿದ್ಯಾರ್ಥಿನಿ ದೀಪಿಕಾ ಸ್ವಾಗತಿಸಿ ವಿದ್ಯಾರ್ಥಿನಿ ದೀಪ್ತಿ ವಂದಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರುಗಳು ಭಾಗವಹಿಸಿದ್ದರು.