ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

0

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ರಕ್ತಾದಾನಿಗಳ ದಿನಾಚರಣೆ ಜೂ. 14ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆರೋಗ್ಯವಂತ ಯುವಕರು 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತಾದಾನ ಮಾಡುವುದರಿಂದ ಜೀವ ಉಳಿಸಲು ಸಾಧ್ಯ ಎಂದು ಹೇಳಿದರು. ಬ್ಲಡ್ ಸೆಂಟರ್ ಅಧಿಕಾರಿ ಪ್ರೊ. ನವ್ಯ ವೇದಿಕೆಯಲ್ಲಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪೆಥಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಅಂಜಲಿ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು. ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ. ಸತ್ಯವತಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಡಾ. ಭಾರತಿ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ದಿಶಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಸ್ವಯಂ ಪ್ರೇರಿತ ರಕ್ತದಾನ ನಡೆಯಿತು.