ಅರಂಬೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

0

ಅರಂಬೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಸೌಮ್ಯ ಬಿ. ಭಾರದ್ವಾಜ್ ರವರ ಅಧ್ಯಕ್ಷತೆಯಲ್ಲಿ ಜೂ.13 ರಂದು ಅರಂಬೂರು ಮೂಕಾಂಬಿಕಾ ಭಜನಾ ಮಂದಿರದ ಶ್ರೀ ಗೋಪಾಲಕೃಷ್ಣ ಸಭಾಂಗಣದಲ್ಲಿ ನಡೆಯಿತು.

ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಹರೀಶ್ ಕುಮಾರ್ ಎಂ.ಎಸ್, ಪಶು ವೈದ್ಯಾಧಿಕಾರಿ ಮಾಧವನ್, ಆಲೆಟ್ಟಿ ಸೊಸೈಟಿ ಮಾಜಿ ಅಧ್ಯಕ್ಷ ರೊ. ಬಾಪೂ ಸಾಹೇಬ್, ಸಂಘದ ಉಪಾಧ್ಯಕ್ಷೆ ಶ್ರೀಮತಿ ಶ್ಯಾಮಲಾ ಪದ್ಮಯ್ಯ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಬೋನಸ್ ವಿತರಿಸಲಾಯಿತು.


ಶ್ರೀಮತಿ ಪೂರ್ಣಿಮಾ ಪ್ರಾರ್ಥಿಸಿದರು. ಶ್ರೀಮತಿ ಶ್ಯಾಮಲಾ ವಿಷ್ಣುಪ್ರಸಾದ್ ಸ್ವಾಗತಿಸಿದರು.
ಸಂಘದ ಕಾರ್ಯದರ್ಶಿ ಶ್ರೀಮತಿ ಉಷಾ ದಯಾನಂದ ರೈ ವಾರ್ಷಿಕ ‌ವರದಿ ವಾಚಿಸಿದರು. ಸಿಬ್ಬಂದಿ ಶ್ರೀಮತಿ ಮೋಹಿನಿ ವಂದಿಸಿದರು. ಶ್ರೀಮತಿ ಜ್ಯೋತಿ ಭಟ್ ಕಾರ್ಯಕ್ರಮ ನಿರೂಪಿಸಿದರು.