ಕಲ್ಲುಗುಂಡಿ :ಗಾಯಗೊಂಡು ಹೊಳೆಯಲ್ಲಿ ಬಿದ್ದಿದ್ದ ದನ,ಸ್ಥಳೀಯರಿಂದ ರಕ್ಷಣೆ

0

ಗಾಯಗೊಂಡು ಹೊಳೆಯಲ್ಲಿ ಬಿದ್ದು ಜೀವನ್ಮರಣ ಹೋರಾಟ ಮಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ ಘಟನೆ ಜೂನ್ 14ರಂದು ಸಂಜೆ ನಡೆದಿದೆ.

ನದಿಯಲ್ಲಿ ಗಾಯಗೊಂಡು ಬಿದ್ದಿದ್ದ ದನಕ್ಕೆ ಮೇಲೆ ಬರಲು ಸಾಧ್ಯವಾಗದೆ ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ರವರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಬಂದ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಹಾಗೂ ಮಾಜಿ ಅಧ್ಯಕ್ಷರಾದ ಜಿ. ಕೆ.ಹಮೀದ್ ಉಪಾಧ್ಯಕ್ಷ ಎಸ್ ಕೆ ಹನೀಫ್ ಅಗ್ನಿ ಶಾಮಕ ದಳದವರಿಗೆ ಕರೆ ಮಾಡಿದ್ದು, ಸ್ಥಳೀಯರ ಸಹಕಾರದಿಂದ ದನವನ್ನು ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುಳ್ಯದ ಪಶು ಇಲಾಖೆಯವರನ್ನು ಕರೆಸಿ ಪಶುವಿಗೆ ಚಿಕಿತ್ಸೆ ನೀಡಿ ಆರೈಕೆ ಮಾಡಿದ್ದಾರೆ.