ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಲಿಸ್ ಇಲಾಖೆಯ ವತಿಯಿಂದ ಜಾಗೃತಿ ಕಾರ್ಯಾಗಾರ

0

ಸುಳ್ಯಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಂಚಾರಿ ನಿಯಮ ಉಲ್ಲಂಘನೆ ಹಾಗೂ ಮಾದಕ ದ್ರವ್ಯ ಸೇವನೆ ಮತ್ತು ಅಪ್ರಾಪ್ತ ವಯಸ್ಸಿನಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ಮತ್ತು ಸೈಬರ್ ಕ್ರೈಂ ಕುರಿತು ಮಾಹಿತಿ ಮತ್ತು ಜಾಗೃತಿ ಕಾರ್ಯಾಗಾರವನ್ನು
ಜೂ.14 ರಂದು ಹಮ್ಮಿಕೊಳ್ಳಲಾಯಿತು.

ಸುಳ್ಯ ಪೊಲೀಸ್ ಠಾಣೆಯ ಪಿ .ಎಸ್. ಐ ಸರಸ್ವತಿ ಯವರು ಸಂಚಾರಿ ನಿಯಮ, ಮಾದಕ ವ್ಯಸನ, ಲೈಂಗಿಕ ದೌರ್ಜನ್ಯ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿಕಾರ್ಯಾಗಾರವನ್ನು ನಡೆಸಿಕೊಟ್ಟರು. ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ.ಆರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿಐ.ಕ್ಯೂ.ಏ.ಸಿ ಸಂಚಾಲಕ ಡಾ. ಜಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಶೈಲಜಾ ಎಂ. ಆರ್. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅದ್ಯಾಪಕ ವೃಂದದವರು, ಸಿಬ್ಬಂದಿ ವರ್ಗದವರು ಭಾಗವಹಿಸಿದರು.