ಪಂಜ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ.

0

⬆️ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಇದೆ.-ಶಾಸಕಿ ಕು.ಭಾಗೀರಥಿ ಮುರುಳ್ಯ

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವು ಜೂ.15ರಂದು ನಡೆಯಿತು.

ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿ.
“ಸರಕಾರಿ ಉದ್ಯೋಗ ಬೇಕು. ಶಿಕ್ಷಣಕ್ಕೆ ಖಾಸಗಿ ಶಾಲೆಯನ್ನು ಆಯ್ಕೆ ಮಾಡುವುದು ಸರಿಯಲ್ಲ.ಸಂಕೋಚಿತ ಮನೋಭಾವ ಬಿಡ ಬೇಕು. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಇದೆ. ಸರಕಾರಿ ಶಾಲೆಗಳಲ್ಲಿ ಕಲಿತವರು ಕೂಡ ಉನ್ನತ ಸ್ಥಾನದಲ್ಲಿ ಇರುವುದನ್ನು ಕಾಣಬಹುದು . ಸರಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಕೂಡ ಬಂದಿರುತ್ತದೆ.”
ಎಂದು ಹೇಳಿದರು.

ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ವಹಿಸಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ, ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಉಪಾಧ್ಯಕ್ಷೆ ಲಕ್ಷ್ಮೀ ನೆಕ್ಕಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಉದ್ಯಮಿ ಕಿರಣ್ ರಾವ್ ರವರು ನೀಡಿರುವ ಛತ್ರಿಯನ್ನು ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿತರಣೆ ನಡೆಯಿತು.
ಕಟ್ಟಡದ ಕಾಮಗಾರಿ ಗುತ್ತಿಗೆದಾರ ಶಬಿರ್ ಯಂ ಯಸ್ ಬಾಳಿಲ ರವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ,ಶಾಸಕ ಎಸ್ ಅಂಗಾರ ರವರ ಶಿಫಾರಸ್ಸಿನ ಮೇರೆಗೆ ಸರ್ಕಾರದ ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣ ಗೊಂಡಿದೆ.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪ್ರಜ್ವಲ್ ಪ್ರಾರ್ಥಿಸಿದರು.ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಸ್ವಾಗತಿಸಿದರು. ಛತ್ರಿ ವಿತರಣೆಯನ್ನು ಶಿಕ್ಷಕಿ ಶ್ರೀಮತಿ ನೇತ್ರಾವತಿ ನಿರ್ವಹಿಸಿದರು.ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಮಂಜುಳಾ ವಂದಿಸಿದರು.