ಆರ್.ಕೆ. ಭಟ್ ಕುರುಂಬುಡೇಲು ದಂಪತಿಗಳಿಂದ ದರ್ಖಾಸ್ತು ಮತ್ತು ಪಾಟಾಜೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ವಿತರಣೆ

0

ಬಿಜೆಪಿ ಸುಳ್ಯ ಮಂಡಲ ಉಪಾಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲುರವರು ಬೆಳ್ಳಾರೆ ಗ್ರಾಮದ ಪಾಟಾಜೆ ಮತ್ತು ದರ್ಖಾಸ್ತು ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಜೂ. 15ರಂದು ಬ್ಯಾಗ್ ವಿತರಿಸಿದರು.


ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷ ಹರೀಶ್ ರವರ ಅಧ್ಯಕ್ಷತೆಯಲ್ಲಿ ದರ್ಖಾಸ್ತು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯ ಅಬುಸಾಲಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಬೆಳ್ಳಾರೆ ಗ್ರಾ.ಪಂ. ಸದಸ್ಯೆ ಶ್ರೀಮತಿ ಭವ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮ ಸ್ವಾಗತಿಸಿ, ಸಹಶಿಕ್ಷಕ ಬಾಲಾಜಿ ವಂದಿಸಿದರು. ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಶ್ರೀಮತಿ ಸ್ವಾತಿ ಆರ್.ಕೆ. ಭಟ್ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು. ಸಹ ಶಿಕ್ಷಕಿ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ದರ್ಖಾಸ್ತು ಶಾಲೆಯ 57 ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪಾಟಾಜೆ ಶಾಲೆಯ 10 ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.