ಮೇನಾಲ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

0

ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ.ಮೇನಾಲ
ಶಾಲೆಯ ಬಡ ಹತ್ತು ಜನ ವಿಧ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಲಾಯಿತು.


ಪುಸ್ತಕವನ್ನು ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉಧ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲರವರ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ಕನಕ ಟೀಚರ್,ಲತಾ ಮೇಡಂ, ಉಷಾ ಮೇಡಂ ಮತ್ತು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.