ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ

0

ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘಗಳಿಗೆ ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಮತಪತ್ರದ ಮೂಲಕ ಚುನಾವಣೆಯು ನಡೆಯಿತು.

ಈ ಚುನಾವಣೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ರವ್ಯ. ಎಂ. ಡಿ .ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ, ಕಾರ್ಯದರ್ಶಿಯಾಗಿ ಜೋಯ್ಸ್ಟನ್ ಕ್ರಾಸ್ತ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ, ಕ್ರೀಡಾ ಕಾರ್ಯದರ್ಶಿ ಕೃತಿಕಾ .ಜಿ ಬಾಳುಗೋಡು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ , ಜತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಇಶಾಮ್ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಚಂದನ ಪಿ.ಎ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ,ಜತೆ ಕಾರ್ಯದರ್ಶಿಯಾಗಿ ತನುಜ್ಞ .ಸಿ. ಕೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಆಯ್ಕೆಯಾದರು. ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ ಎನ್ ರವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ, ಸಂಸ್ಥೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಸಹಕರಿಸಿದರು.