ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಗಾರ

0

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಜೂನ್ 15ರಂದು ಹಮ್ಮಿಕೊಳ್ಳಲಾಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜಾ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಕೆ.ವಿ.ಜಿ ವಿದ್ಯಾಸಂಸ್ಥೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನುರಾಧ ಕುರುಂಜಿ ಇವರು, ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು
ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಬಹುದು ಎಂದು ತಿಳಿಸುತ್ತಾ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ರೀಟಲತ ಡಿ’ ಸಿಲ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕಿ ಸವಿತಾ ಕುತ್ತಿಮುಂಡ ಸ್ವಾಗತಿಸಿ, ವಂದಿಸಿದರು. ಪ್ರೌಢಶಾಲಾ ಶಿಕ್ಷಕರು ಸಹಕರಿಸಿದರು.