







ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ ಇದರ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್, ಸುಳ್ಯ ಘಟಕ ಇವದ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಕೌಶಲ್ಯಾಭಿವೃದ್ಧಿ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಕ್ರಮ ಜೂ. 18ರಂದು ಬೆಳ್ಳಾರೆ ಕೆಪಿಎಸ್ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ನಡೆಯಲಿದೆ. ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ ಇದರ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಸಂತೋಷ್ ಕುಮಾರ್ ಸೈಬರ್ ಕ್ರೈಮ್ ವಿಚಾರವಾಗಿ ಜಾಗೃತಿ ಮತ್ತು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆಯವರು ಕೌಶಲ್ಯಾಭಿವೃದ್ಧಿ ವಿಚಾರವಾಗಿ ಉಪನ್ಯಾಸ ನೀಡಲಿದ್ದಾರೆ.









