ಸುಳ್ಯ ಅಗ್ನಿಶಾಮಕ ಠಾಣೆಯ ನಾರಾಯಣ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ಪ್ರದಾ‌ನ

0

ಸುಳ್ಯದ ಅಗ್ನಿಶಾಮಕ ಠಾಣೆಯ ಅಗ್ನಿಶಾಮಕ ದಳದ ಸಿಬ್ಬಂದಿ (ಫೈರ್ ಮ್ಯಾನ್) ಆಗಿರುವ ನಾರಾಯಣ ಗೌಡ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡಿದರು.
ನಾರಾಯಣ ಗೌಡ ಅವರು ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಬರ್ಕಳ ನಿವಾಸಿಯಾಗಿದ್ದು ಕಳೆದ 27 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಅಗ್ನಿಶಾಮಕ ಠಾಣೆಯಲ್ಲಿ ಈ ಮೊದಲು ಕರ್ತವ್ಯ ನಿರ್ವಹಿಸಿದ್ದರು.