ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಯವರಿಗೆ ಸುಳ್ಯದ ಪ್ರಮುಖರಿಂದ ಅಭಿನಂದನೆ

0

ಕರ್ನಾಟಕ ಸರಕಾರ ದಿಂದ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಾತಿ ಹೊಂದಿ ಅಧಿಕಾರ ಸ್ವೀಕರಿಸಿದ ಸುಳ್ಯದ ಬಿಳಿಮಲೆಯವರಾಗಿದ್ದು, ಸುಳ್ಯದ ನೆಹರು ಸ್ಮಾರಕ ಕಾಲೇಜನಲ್ಲಿ ಪ್ರಾದ್ಯಾಪಕರಾಗಿದ್ದ ದೆಹಲಿ ಜವಹಾರ್ ಲಾಲ್ ನೆಹರು ಯೂನಿವರ್ಸಿಟಿ ( ಜೆ. ಎನ್. ಯು ) ಕನ್ನಡ ವಿಭಾಗ ದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಡಾ. ಪುರುಷೋತ್ತಮ ಬಿಳಿಮಲೆ ಯವರನ್ನು
ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಸುಳ್ಯದ ಪ್ರಮುಖರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್, ಕೆ.ಪಿ.ಸಿ.ಸಿ. ಅಲ್ಪ ಸಂಖ್ಯಾತ ವಿಬಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತುಳು ಅಕಾಡೆಮಿ ಮಾಜಿ ಸದಸ್ಯ ಕೆ. ಟಿ. ವಿಶ್ವನಾಥ್, ಸುಳ್ಯ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸುಳ್ಯ ನಗರ ಪಂಚಾಯತ್ ಸದಸ್ಯರು ಗಳಾದ ಶರೀಫ್ ಕಂಠಿ, ಸಿದ್ದೀಕ್ ಕೊಕ್ಕೋ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಮೊದಲಾದವರು ಉಪಸ್ಥಿತರಿದ್ದರು