ಕಡಪಾಲ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ

0

ಕಾರಿನಲ್ಲಿದ್ದವರಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ದ.ಕ.ಸಂಪಾಜೆ ಗ್ರಾಮದ ಕಡಪಾಲದಲ್ಲಿ ಜೂ.16ರಂದು ಸಂಜೆ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಆಲ್ಟೋ ಕಾರು (KA 19 MC 5684) ಹಾಗೂ ಕಲ್ಲುಗುಂಡಿಯಿಂದ ಸುಳ್ಯಕ್ಕೆ ಬರುತ್ತಿದ್ದ ಹೂಂಡೈ ಕಾರು ( KA21 Z 2368) ಕಡಪಾಲ ಸೇತುವೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಆಲ್ಟೋ ಕಾರಿನಲ್ಲಿದ್ದ ಮಹಿಳೆ , ಇಬ್ಬರು ಮಕ್ಕಳು ಸೇರಿದಂತೆ ಐದು ಜ‌ನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಹೂಂಡೈ ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿರುವುದಾಗಿ ತಿಳಿದುಬಂದಿದೆ.