ಚೆಂಬು: ವಿಪತ್ತು ನಿರ್ವಹಣಾ ಸಮಿತಿ ಸಭೆ

0

ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಪತ್ತು ನಿರ್ವಹಣಾ ಸಮಿತಿ ಮತ್ತು ಚೆಂಬು ಗ್ರಾಮ ಪಂಚಾಯತಿ ಜಂಟಿ ಆಶ್ರಯದಲ್ಲಿ ಮಳೆ ಹಾನಿ ತಡೆ, ಮಲೇರಿಯಾ ತಡೆ ಮಾಸಾಚರಣೆ ಮತ್ತು ವಿಪತ್ತು ನಿರ್ವಹಣಾ ಸಮಿತಿ ಸಭೆಯು ಜೂ.15ರಂದು ಚೆಂಬು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ತೀರ್ಥರಾಮ ಪೂಜಾರಿಗದ್ದೆ ಅವರು ಅಧ್ಯಕ್ಷತೆ ವಹಿಸಿದ್ದರು. ನೋಡೆಲ್ ಅಧಿಕಾರಿ ಯಾಗಿ ಹೇಮಂತ್ ಅವರು ಭಾಗವಹಿಸಿ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು,ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮಸ್ಥರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿದ್ದಪ್ಪ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.ಕಾರ್ಯದರ್ಶಿ ಕು. ಲಸಿತ ವಂದಿಸಿದರು.