ಐವರ್ನಾಡು ಸರಕಾರಿ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಪರಿಸರ ದಿನಾಚರಣೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯ ಪಾಲೆಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.

ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮತ್ತು ಶಾಲೆಯಲ್ಲಿ ಗಿಡ ನಾಟಿ ಮಾಡುವುದರೊಂದಿಗೆ ಮಕ್ಕಳಿಗೆ ಗಿಡ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಮಾಧವ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಎ.ಎಸ್.ಐ ಜನಜಾಗೃತಿ ವಲಯಾಧ್ಯಕ್ಷ ಭಾಸ್ಕರ್ ಅಡ್ಕಾರ್, ರವರು ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಐವರ್ನಾಡು ಗ್ರಾಮ ಪಂಚಾಯತ್ ನ ಸದಸ್ಯ ಸುಂದರ ಲಿಂಗಂ ಅಧ್ಯಕ್ಷತೆಯನ್ನು ವಹಿಸಿದ್ದರು.


ಈ ಸಂದರ್ಭದಲ್ಲಿಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನುನೆಡಲಾಯಿತು.

ವೇದಿಕೆಯಲ್ಲಿ ತಾಲೂಕಿನ ಕೃಷಿ ಮೇಲ್ವಿಚಾರಕ ರಮೇಶ್, ವಲಯ ಅಧ್ಯಕ್ಷ ವೇದ ಹೆಚ್ ಶೆಟ್ಟಿ, ಶೌರ್ಯವಿಪತ್ತು ಘಟಕ ಸಂಯೋಜಕ ರಮೇಶ್, ಶಾಲಾ ಎಸ್ .ಡಿ .ಎಂ. ಸಿ ಸದಸ್ಯ ದಿನೇಶ್, ಶಾಲಾ ಶಿಕ್ಷಕಿ ಸರಸ್ವತಿ, ಶಾಲಾ ವಿದ್ಯಾರ್ಥಿ ನಾಯಕಿ ಶ್ವೇತಾ ಪಾಲೆಪ್ಪಾಡಿ, ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಕಟ್ಟತಾರು, ಶಿಕ್ಷಕ ವೃಂದದವರು , ಒಕ್ಕೂಟದ ಪದಾಧಿಕಾರಿಗಳು, ಶೌರ್ಯವಿಪತ್ತು ಘಟಕದ ಸದಸ್ಯರು, ವಲಯದ ಸೇವಾ ಪ್ರತಿನಿಧಿ ಯಶೋಧ ಹರೀಣಾಕ್ಷಿ, ಗೀತಾಹರಿಣಿ. ಕೆ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಒಕ್ಕೂಟದ ಸದಸ್ಯರು ವಲಯ ಮೇಲ್ವಿಚಾರಕಿ ಶ್ರೀಮತಿ ವಿಶಾಲ .ಕೆ ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವನಿತಾ ಸ್ವಾಗತಿಸಿ, ಶಾಲಾ ಶಿಕ್ಷಕಿ ಅರವಿಂದ ವಂದಿಸಿದರು.