















ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಶಾಲಾ ಪ್ರಾರ್ಥನೆ ಬಳಿಕ ಆಚರಿಸಲಾಯಿತು. ಯೋಗ ಶಿಕ್ಷಕಿ ಶ್ರೀಮತಿ ಮಾಲತಿಯವರು ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಿ ನಂತರ ಮಕ್ಕಳಿಂದ ಯೋಗಾಭ್ಯಾಸವನ್ನು ಮಾಡಿಸಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.









