ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಕೆ.ವಿ.ಜಿ. ಮೆಡಿಸಿನ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಾಹಿತಿ ಮತ್ತು ಕಿರು ಯೋಗಾಸನ ಜೂ. 21ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರ ಅಧ್ಯಕ್ಷತೆಯಲ್ಲಿ ನಡೆಯಿತು. ಡಾ. ಕೆ.ವಿ ಚಿದಾನಂದ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶಬಿನಾ ಟಿ.ಟಿ ಯೋಗದಿಂದ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಬಳಿಕ ಪ್ರಾಣಾಯಾಮ ನಡೆಸಲಾಯಿತು.
ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ಡಾ. ನಿಲಾಂಬಿಕೈ ನಟರಾಜನ್ ಅತಿಥಿಯಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಗಳು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.