ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

0

ಜೂನ್ 21ರಂದು ರೋಟರಿ ಪ್ರೌಢಶಾಲೆಯಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.


ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಗಿರಿಜಾ ಶಂಕರ್ ತುದಿಯಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಾದ ತನುಷ್ ಹಾಗೂ ಕು.ಶಮಾ ವಿಶೇಷ ಯೋಗ ಪ್ರದರ್ಶನ ನೀಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.


ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ , ಶಿಕ್ಷಕಿ ಚಂದ್ರಕಲಾ .ಡಿ . ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕು.ವಂದಿತಾ, ಕು.ಪೂರ್ವಿಕಾ ಹಾಗೂ ಕು.ಗಾನವಿ ಪ್ರಾರ್ಥಿಸಿದರು. ವಿದ್ಯಾರ್ಥಿ ಅಹನ್ ಕಿರಣ್ ವಂದಿಸಿದರು. ಶಿಕ್ಷಕಿ ಕು. ರಮ್ಯಾ ಅಡ್ಕಾರ್ ಕಾರ್ಯಕ್ರಮ ನಿರೂಪಿಸಿದರು.