ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್-21ರಂದು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸುಳ್ಯ ಕ್ಲಸ್ಟರ್ ಸಿ.ಅರ್.ಪಿ ಶ್ರೀಮತಿ ಮಮತಾ ಇವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ ಸುಳ್ಯ ಇಲ್ಲಿಯ ಎಂಬಿಎ ವಿಭಾಗದ ಮುಖ್ಯಸ್ಥ ಕೃಷ್ಣಾನಂದ ಅಂಬೆಕಲ್ಲು ಇವರು ವಿವಿದ ಆಸನಗಳನ್ನು ಹಾಗೂ ಪ್ರಣಾಯಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿ!ಅಂತೋನಿ ಮೇರಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಪಂಜದಬೈಲು ಸ್ವಾಗತಿಸಿ, ಶಿಕ್ಷಕಿ ಸ್ಮಿತಾ ವಂದಿಸಿ, ಶಿಕ್ಷಕಿ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು,ಲ.

ಎಲ್ಲಾ ಶಿಕ್ಷಕಿಯರು ಸಹಕರಿಸಿದರು. ಸುಮಾರು 370 ವಿದ್ಯಾರ್ಥಿಗಳು ಭಾಗವಹಿಸಿದರು.