ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ಪ್ಲಾಟಿನಮ್ ಅವಾರ್ಡ್

0


ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ 2023-24ನೇ ಸಾಲಿನಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಸಮಾಜ ಸೇವೆಗೆ ರೋಟರಿ ಜಿಲ್ಲೆ 31 81 ಇದರ ಅತ್ಯುನ್ನತ ಪ್ರಶಸ್ತಿ ಪ್ಲಾಟಿನಮ್ ಅವಾರ್ಡ್ ದೊರಕಿರುತ್ತದೆ. ಜೂ. 8 ಹಾಗೂ 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್ ಹಾಗೂ ಕಾರ್ಯದರ್ಶಿ ಮೋಹನದಾಸ್ ಎಣ್ಣೆ ಮಜಲ್ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಿಕ್ರಮದತ್ತ ,ನಿಕಟ ಪೂರ್ವ ಗವರ್ನರ್ ಪ್ರಕಾಶ್ ಕಾರಂತ್, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಜಿಲ್ಲಾ ಪದಾಧಿಕಾರಿಗಳು, ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯರ್, ಪೂರ್ವ ಅಧ್ಯಕ್ಷರುಗಳು ಹಾಗೂ ಸದಸ್ಯರು ಹಾಜರಿದ್ದರು .