ಪೆರುವಾಜೆ ಡಾ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

0

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರಿಗೆ ಗೌರವ ಸನ್ಮಾನ

ಬೆಳ್ಳಾರೆಯ ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 32ನೇ ವಾರ್ಷಿಕೋತ್ಸವು ಜೂ.14ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೋ. ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಚೇತನ ಸೋಮೇಶ್ವರ, ಗುತ್ತಿಗಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ, ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರವಿಕುಮಾರ್ ಕಿರಿಭಾಗ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಯತೀಶ್ ಕುಮಾರ್ ಎಂ, ವಿದ್ಯಾರ್ಥಿ ಕ್ಷೇಮಪಾಲಕ ಕಾಂತರಾಜು ಸಿ. ಮತ್ತು ವಿಭಾಗವಾರು ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಧನುಷ್, ಕೃತಿಕಾ, ಶಿಲ್ಪ, ನಿತಿನ್ ಮತ್ತು ಧನ್ಯಶ್ರೀ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮತ್ತು ದತ್ತಿನಿಧಿ ವಿದ್ಯಾರ್ಥಿ ವೇತನಗಳನ್ನು ವಿತರಣೆ ಮಾಡಲಾಯಿತು.

ಕು.ಧನ್ಯಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಲಿಖಿತ‌ ಮತ್ತು ತಂಡದವರು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಕೆ, ಅಧ್ಯಾಪಕರಾದ ಶ್ರೀಮತಿ ರಶ್ಮಿಕಾ ಕರ್ಕೇರಾ, ಶ್ರೀಮತಿ ಹರ್ಷಿತಾ, ಶ್ರೀಮತಿ ವಿನುತ ಬಹುಮಾನ ವಿತರಣೆಯನ್ನು ನಡೆಸಿಕೊಟ್ಟರು.