ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನಿಹಾನಿ ವಾಲ್ತಾಜೆಯಿಂದ ಯೋಗ ಪ್ರದರ್ಶನ ಮತ್ತು ಪ್ರಾತ್ಯಕ್ಷತೆ

0

ದ.ಕ. ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ದಕ್ಷಿಣ ಕನ್ನಡ
ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು ದಕ್ಷಿಣ ಕನ್ನಡ ಇವರ ಸಹಕಾರದೊಂದಿಗೆ ಮಂಗಳೂರಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯಲ್ಲಿ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ ಯೋಗ ಪ್ರದರ್ಶನ ಮತ್ತು ಪ್ರಾತ್ಯಕ್ಷತೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ಡಾ. ರಿಷ್ಯಂತ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿಹಾನಿ ವಾಲ್ತಾಜೆ ಯವರನ್ನು ಗೌರವಿಸಲಾಯಿತು.