ದೇವರಕಾನ ಸ.ಹಿ.ಪ್ರಾ.ಶಾಲೆಯಲ್ಲಿ ಯೋಗ ದಿನಾಚರಣೆ

0

ಐವರ್ನಾಡು ಗ್ರಾಮದ ದೇವರಕಾನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂ.21 ರಂದು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪ್ರಮೀಳಾರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಹಶಿಕ್ಷಕಿ ಸೌಮ್ಯ ಬಿ ಕೆ ರವರು ದೈಹಿಕ, ಮಾನಸಿಕ ಅರೋಗ್ಯವನ್ನು ಕಾಪಾಡುವಲ್ಲಿ ಯೋಗದ ಮಹತ್ವವೇನು ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.ಅತಿಥಿ ಶಿಕ್ಷಕರಾದ ದೀಪ್ತಿ ಸಿ. ವಿ ಮತ್ತು ಗಾಯತ್ರಿ.ಪಿ ಯವರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.