ಸುಳ್ಯದಲ್ಲಿ ಬಿಜೆಪಿಯ ನೂತನ ಕಾರ್ಯಾಲಯ ಉದ್ಘಾಟನೆ

0

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಂದ ಉದ್ಘಾಟನೆ

ಬಿಜೆಪಿ ಮಂಡಲ ಸಮಿತಿ ಹಾಗೂ ತಾಲೂಕು ಜಾತ್ಯಾತೀತ ಜನತಾದಳದ ವತಿಯಿಂದ ಯಡಿಯೂರಪ್ಪರಿಗೆ ಗೌರವಾರ್ಪಣೆ

ಸುಳ್ಯದ ಅಂಬಟೆಡ್ಕದಲ್ಲಿ ಸ್ವಂತ ನಿವೇಶನದ ಮೂಲಕ ನಿರ್ಮಾಣಗೊಂಡ ಬಿಜೆಪಿಯ ನೂತನ ಕಾರ್ಯಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜೂ.24ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕ ಎಸ್.ಅಂಗಾರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಹಾಗೂ ಸುಳ್ಯ ತಾಲೂಕು ಜಾತ್ಯಾತೀತ ಜನತಾದಳದ ವತಿಯಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಗೌರವಾರ್ಪಣೆ ಮಾಡಲಾಯಿತು.