ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಮೂಲಭೂತ ಸೌಕರ್ಯಗಳ ಬಗ್ಗೆ ಸುದೀರ್ಘ ಚರ್ಚೆ

ಕೊಡಿಯಾಲ ಗ್ರಾಮ ಪಂಚಾಯತ್ 2024 – 25 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜೂ‌.27 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷನ್ ಕೆ.ಟಿಯವರ ಅಧ್ಯಕ್ಷತೆಯಲ್ಲಿ ಕೊಡಿಯಾಲ ಸ.ಹಿ.ಪ್ರಾ.ಶಾಲೆಯಲ್ಲಿ ಜೂ.27 ರಂದು ನಡೆಯಿತು.


ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ವಿಜೇತ್ ಎಸ್.ನೋಡೆಲ್ ಅಧಿಕಾರಿಯಾಗಿದ್ದರು.
ಪಂಚಾಯತ್ ಸಿಬ್ಬಂದಿ ಶ್ರೀಮತಿ ಹರಿಣಿ ವರದಿ ಮಂಡಿಸಿದರು.


ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಚಿತ್ರಾ ಹಾಗೂ ಸದಸ್ಯರು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ರಸ್ತೆ ದುರವಸ್ಥೆ, ಕಲ್ಪಣೆ ಬಸ್ಟೆಂಡ್ ರಿಪೇರಿ, ಅಂಗನವಾಡಿ ಶಿಕ್ಷಕಿ, ಕುಡಿಯುವ ನೀರು,ವಿದ್ಯುತ್ ಸಮಸ್ಯೆ, ಸರಕಾರಿ ಬಸ್ಸು ಕೊಡಿಯಾಲಕ್ಕೆ ಬಾರದಿರುವ ಬಗ್ಗೆ,ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ.ಸ್ವಾಗತಿಸಿ,ವಂದಿಸಿದರು.
ಸಿಬ್ಬಂದಿ ವರ್ಗದವರು ಸಹಕರಿಸಿದರು.