ಜಾಲ್ಸೂರು: ಕಾಳಮನೆ ಬಳಿ ಸ್ಕೂಟಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಕಾರು

0

ಅತೀ ವೇಗದಿಂದ ಬಂದ ಕಾರೊಂದು ಸ್ಕೂಟಿಗೆ ಓವರ್ ಟೇಕ್ ಮಾಡುವ ರಭಸದಲ್ಲಿ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ಜಾಲ್ಸೂರು ಗ್ರಾಮದ ಕಾಳಮನೆಯಲ್ಲಿ ಜೂ.28ರಂದು ಬೆಳಿಗ್ಗೆ ಸಂಭವಿಸಿದೆ.

ಸುಳ್ಯ ಭಾಗದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಕಾಳಮನೆ ಬಳಿ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕೆಂಪು ಕಾರೊಂದು ಓವರ್ ಟೇಕ್ ಮಾಡುವ ಯತ್ನದಲ್ಲಿ ಸ್ಕೂಟಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಸ್ಕೂಟಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸವಾರ ಚಂದ್ರಶೇಖರ ಹಾಗೂ ಅವರ ಪುತ್ರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.