ಕೊಲ್ಲಮೊಗ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಇಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜೂ. 26 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಎ ಒಕ್ಕೂಟದ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿ ಪಳ್ಳ ಇವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸುಬ್ರಹ್ಮಣ್ಯ ವಲಯದ ಉಪ ಅರಣ್ಯ ನಿರೀಕ್ಷಕರಾದ ಸದಾನಂದ ಅವರು ಮಾಹಿತಿಯನ್ನು ನೀಡಿದರು..ಈ ಸಂದರ್ಭದಲ್ಲಿ ಅರಣ್ಯ ರಕ್ಷಕರಾದ ಅಶೋಕ್, ಜನಜಾಗೃತಿ ವಲಯದ ಅಧ್ಯಕ್ಷರಾದ ಮಾಧವ ಚಾಂತಾಳ, ಸುಳ್ಯತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಸತೀಶ್ ಟಿ.ಎನ್. ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಮೋಹಿನಿ ಕಟ್ಟ, ಬಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ್ ಕೋನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಸೇವಾ ಪ್ರತಿನಿಧಿ ಸಾವಿತ್ರಿ ಮಾಡಿದರು. ಪ್ರಸ್ತಾವಿಕ ಹಾಗೂ ಸ್ವಾಗತವನ್ನು ಸುಳ್ಯತಾಲೂಕಿನ ಕೃಷಿ ಅಧಿಕಾರಿಯಾಗಿರುವಂತ ಶ್ರೀಯುತ ರಮೇಶ್ ನೆರವೇರಿಸಿದರು . ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಪರಿಸರ ಗೀತೆ ,ಭಾಷಣ, ಪ್ರಬಂಧ ಮತ್ತು ಬಗ್ಗೆ ಎಲೆಗಳನ್ನು ಗುರುತಿಸುವುದು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.