ಜು.02 ರಿಂದ ಜು.09 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1812 ನೇ ಮದ್ಯವರ್ಜನ ಶಿಬಿರ

0

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸುಳ್ಯ, ತಾಲೂಕು ಬೆಳ್ಳಾರೆ ವಲಯ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸುಳ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಲಾಯಿಲ, ಉಜಿರೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟೀಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ ನವಜೀವನ ಸಮಿತಿಗಳು ಸುಳ್ಯ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ 1812ನೇ ಮದ್ಯವರ್ಜನ ಶಿಬಿರವು ಜು.2 ರಿಂದ ಜು.09 ರ ತನಕ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಜು.02 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ ಅಮೆಚೂರು ಅಧ್ಯಕ್ಷತೆ ವಹಿಸಲಿದ್ದಾರೆ.ಈ ಸಂದರ್ಭದಲ್ಲಿ
ಹಲವು ಜನ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜು.09 ರಂದು ಮಧ್ಯಾಹ್ನ ಗಂಟೆ 12.00 ಸಮಾರೋಪ ಸಮಾರಂಭ ನಡೆಯಲಿದೆ.ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ಳಾರೆ ಇದರ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್ .ರೈ.ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕಿ ಭಾಗೀರಥಿ ಮುರುಳ್ಯ , ಮಾಜಿ ಉಸ್ತುವಾರಿ ಸಚಿವರಾದ ರಮಾನಾಥ ರೈ ,ಮಾಜಿ ಸಚಿವ ಎಸ್.ಅಂಗಾರ ಹಾಗೂ ಹಲವು ಜನ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಜು.02 ರಿಂದ ಜು.08 ರವರೆಗೆ ಪ್ರತೀದಿನ ಗಣ್ಯರಿಂದ ಮಾಹಿತಿ ಮಾರ್ಗದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ,ಭಜನಾ ಕಾರ್ಯಕ್ರಮಗಳು ನಡೆಯಲಿದೆ.