ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ರನ್ನು‌ ಭೇಟಿಯಾದ ಅರೆಭಾಷೆ ಅಕಾಡೆಮಿ ನೂತನ ಸಮಿತಿ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಜೂ.28ರಂದು ಅವರ ಕಚೇರಿಯಲ್ಲಿ‌ ಭೇಟಿ ನೀಡಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳ ಬಗ್ಗೆ‌ ಚರ್ಚೆ‌ ನಡೆಸಿ‌ ಸಲಹೆ ಸೂಚನೆಗಳನ್ನು ನೀಡಿದರು.
ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರುಗಳಾದ ಚಂದ್ರಶೇಖರ್ ಪೇರಾಲು, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಲತಾ ಪ್ರಸಾದ್ ಕುದ್ಪಾಜೆ ಉಪಸ್ಥಿತರಿದ್ದರು. ಇದೊಂದು ಸೌಹಾರ್ದ ಭೇಟಿಯಾಗಿತ್ತು.