ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಮಾಣ ವಚನ ಬೋಧನಾ ಕಾರ್ಯಕ್ರಮ

0

ಸಂಪಾಜೆ ಸoಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಾಧನೆಗೈದ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಸಮಾರಂಭ ,ಮತ್ತುವಿದ್ಯಾರ್ಥಿ ಸರ್ಕಾರದ ಪ್ರತಿ ನಿಧಿಗಳಿಗೆ ಪ್ರಮಾಣ ವಚನ ಬೋಧನಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಜಿ.ರಾಜಾರಾಮ್ ರವರು ನೆರವೇರಿಸಿದರು.ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ಮಾಡಿದಂತಹ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲೂ ಅಗಾಧವಾದ ಪ್ರತಿಭೆ ಅಡಗಿದೆಅದನ್ನುಸಮರ್ಪಕವಾಗಿಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸಾಧಿಸಬೇಕು ಎಂದು ತಮ್ಮ ಉದ್ಘಾಟನಾ ನುಡಿಯಲ್ಲಿ ಮಾತನಾಡಿದರು.


ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ರವರು ಮಾತನಾಡಿ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಪೂರಕವಾದ ವ್ಯವಸ್ತೆಗಳಿವೆ, ವಿದ್ಯಾರ್ಥಿಗಳು ಇಲ್ಲಿ ಹೆಚ್ಚು ಅಂಕಗಳಿಸಲು ಸಾಧ್ಯವಾಗುತ್ತದೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು
.

ಬಳಿಕ 2023 24ನೇ ಸಾಲಿನಲ್ಲಿ ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ,ಪ್ರತಿಭಾ ಪುರಸ್ಕಾರ ನೀಡಲಾಯಿತು ,ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ ಹಿತಾಶ್ರೀ ದ್ವಿತೀಯ ಸ್ಥಾನ ಗಳಿಸಿದ ಶಶಾಂತ್ ಹಾಗೂ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ಖದಿಜತ್ ರಂಜೀನಾ, ದ್ವಿತೀಯ ಸ್ಥಾನ ಗಳಿಸಿದ ಚಸ್ಮಿತ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಚರಿಷ್ಮಾ ದ್ವಿತೀಯ ಸ್ಥಾನವನ್ನು ಪಡೆದ ಅಪ್ರಾಜ್ ಗೆ, ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿ ಸರ್ಕಾರದ ಪ್ರತಿನಿಧಿಗಳಿಗೆ ಪ್ರಮಾಣವಚನವನ್ನು ಬೋಧಿಸಲಾಯಿತು, ಸಮಾಜ ವಿಜ್ಞಾನ ಶಿಕ್ಷಕರಾದ ಎಚ್ ಜಿ ಕುಮಾರ್ ರವರು ಪ್ರಮಾಣವಚನವನ್ನು ಬೋಧಿಸಿದರು, ಶಾಲಾ ನಾಯಕಿಯಾಗಿ ದ್ವಿತೀಯ ಪಿಯುಸಿಯ ಸುಶ್ಮಿತಾ ,ಶಾಲಾ ಉಪನಾಯಕನಾಗಿ ಹತ್ತನೇ ತರಗತಿಯ ದೀನ್ ರಾಜ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿಯ ಧನ್ಯಶ್ರೀ ,ಉಪ ಕಾರ್ಯದರ್ಶಿಯಾಗಿ ಹತ್ತನೇ ತರಗತಿಯ ಬಿಂದ್ಯಾ, ವಿದ್ಯಾರ್ಥಿಗಳ ಚುನಾವಣೆ ಮೂಲಕ ಆಯ್ಕೆಗೊಂಡರು, ಇದಲ್ಲದೆ ವಿವಿಧ ಖಾತೆಗಳ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿರೋಧ ಪಕ್ಷದ ಸದಸ್ಯರುಗಳು ಕೂಡ ಆಯ್ಕೆಯಾದರು.


ಸಂಸ್ಥೆಯ ಸಂಚಾಲಕರಾದ ಎಂ. ಶಂಕರನಾರಾಯಣ ಭಟ್, ನಿಕಟ ಪೂರ್ವ ಸಂಚಾಲಕರು ಮತ್ತು ಪ್ರಸ್ತುತ ಆಡಳಿತ ಮಂಡಳಿಯ ನಿರ್ದೇಶಕರಾದ ಕೊಂದಲ ಕಾಡು ನಾರಾಯಣ ಭಟ್, ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಯು. ಬಿ ಚಕ್ರಪಾಣಿ ,ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಮುರುಳಿ, ಆಡಳಿತ ಮಂಡಳಿಯ ಖಜಾಂಜಿ ಪದ್ಮಯ್ಯ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಎಸ್. ಕೆ ಹನೀಫ್, ಕೊರಗಪ್ಪ, ಶಿಕ್ಷಕ ವೃಂದ, ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು .

ಕಾಲೇಜಿನ ಪ್ರಾಂಶುಪಾಲ ಲೋಕ್ಯಾನಾಯ್ಕ್ ಸ್ವಾಗತಿಸಿ,ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಐತಪ್ಪ ಅಭಿನಂದಿಸಿ, ಪ್ರೌಢಶಾಲಾ ಸಹ ಶಿಕ್ಷಕ ಹೆಚ್ ಜಿ ಕುಮಾರ್ , ನಿರೂಪಿಸಿ, ಪ್ರೌಢ ಶಾಲಾ ಸಹ ಶಿಕ್ಷಕ ಅಪ್ಪುಕುಂಞಿ ವಂದಿಸಿದರು.