ಮಾದಕ ವಸ್ತುಗಳ ದುಷ್ಪರಿಣಾಮ ಮಾಹಿತಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನಾ ವತಿಯಿಂದ ಎಡಮಂಗಲ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಎ ಎಸ್ ಐ ಭಾಸ್ಕರ್ ಉದ್ಘಾಟಿಸಿದರು. ಬಳಿಕ ಅವರು ‘ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ’ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.















ನಿಂತಿಕಲ್ಲು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಶ್ವನಾಥ ಕಲ್ಲೆಂಬಿ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯೋಪಾಧ್ಯಾಯ ಆನಂದ, ನಿಂತಿಕಲ್ಲು ವಲಯ ಮೇಲ್ವಿಚಾರಕಿ ಹೇಮಲತಾ, ಪ್ರಗತಿ ಬಂಧು ಸ್ವಸಹಾಯ ಸಂಘದ ಅಧ್ಯಕ್ಷೆ ಲತಾ ಎರ್ಕ ಹಾಗೂ ಸೇವಾ ಪ್ರತಿನಿಧಿ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು .
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಆನಂದ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಹೇಮಲತಾ ನಿರೂಪಿಸಿದರು.
ಸೇವಾ ಪ್ರತಿನಿಧಿ ರಾಮಣ್ಣ ವಂದಿಸಿದರು.









