








ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಮಾಡಿದರು. ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ ಪ್ರಶಸ್ತಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷರಾದ ಭರತ್ ನೆಕ್ರಾಜೆ, ನಿರ್ದೇಶಕರಾದ ಅಣ್ಣೋಜಿ ಗೌಡ ಕಟ್ಟ, ಕಿರಣ್ ಕುಮಾರ್ ಮಾದನಮನೆ, ಗಿರೀಶ್ ಪದ್ನಡ್ಕ ಉಪಸ್ಥಿತರಿದ್ದರು.









