














ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಯುತರು ಸ್ವಾತಂತ್ರದ ಮಹತ್ವ ಮತ್ತು ಪ್ರಜಾಪ್ರಭುತ್ವದಿಂದಾಗಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದು ಈಗ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಹೇಳಿದರು. ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ಶ್ರೀಮತಿ ರೇವತಿ ನಂದನ್ ರವರು ಉಪಸ್ಥಿತರಿದ್ದರು .ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಭಾರತಿ ರವರು ಸ್ವಾಗತಿಸಿ, ಕಾಲೇಜು ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ರವರು ವಂದನಾರ್ಪಣೆಗೈದರು ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.









