ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸೆ. 17ರಂದು ಹಿಂದಿ ದಿವಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿ ಮಾತನಾಡಿ ಎಲ್ಲಾ ಭಾಷೆಗಳು ಸಮಾನ, ನಾವು ಪ್ರತಿಯೊಂದು ಭಾಷೆಯನ್ನು ಗೌರವಿಸಬೇಕು, ವಿದ್ಯಾರ್ಥಿಗಳಲ್ಲಿ ಭಾಷೆಯನ್ನು ಕಲಿಯುವ ಆಸಕ್ತಿ ಇರಬೇಕು ಎಂದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕಿ, ಹಿಂದಿ ಉಪನ್ಯಾಸಕಿ ರಾಜೇಶ್ವರಿ ಎ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಶ್ರೇಯ ಸ್ವಾಗತಿಸಿ, ದಿಶನ್ ದೇವರಗುಂಡ ವಂದಿಸಿದರು. ಉಪನ್ಯಾಸಕಿ ರಾಜೇಶ್ವರಿ ಎ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಗುಣ ಕಾರ್ಯಕ್ರಮ ನಿರೂಪಿಸಿದರು.










