ಸುಳ್ಯ ರಾಮ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

0

ಸುಳ್ಯ ಶ್ರೀ ರಾಮ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಪೂರ್ವ ಭಾವಿ ಸಭೆಯು ಜ.30 ರಂದು
ಮಂದಿರದಲ್ಲಿ ನಡೆಯಿತು.

ಆಡಳಿತ ಧರ್ಮದರ್ಶಿ ಮಂಡಳಿಯ ಉಪಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ರವರು ಅಧ್ಯಕ್ಷತೆ ವಹಿಸಿದ್ದರು.
ಕಳೆದ ವರ್ಷ
ಫೆಬ್ರವರಿ ತಿಂಗಳಿನಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆದು ಒಂದು ಸಂವತ್ಸರ ಪೂರೈಸಿದ್ದು ಫೆ. 25 ಮತ್ತು 26 ರಂದು ಪ್ರತಿಷ್ಠಾ ವಾರ್ಷಿಕೋತ್ಸವವನ್ನು ಎರಡು ದಿನ ನಡೆಸುವುದಾಗಿ ನಿರ್ಧರಿಸಲಾಯಿತು.

ಆ ಪ್ರಯುಕ್ತ ವಿಶೇಷವಾಗಿ ವೈದಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.
ರಾತ್ರಿ ಮತ್ತು ಮಧ್ಯಾಹ್ನ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಬಗ್ಗೆ ನಿರ್ಧರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ನಿರ್ವಹಣೆಯನ್ನು
ಶ್ರೀ ರಾಮ ಸಾಂಸ್ಕೃತಿಕ ಸೇವಾ ಸಂಘದ ಸದಸ್ಯರು ನಿರ್ವಹಿಸುವಂತೆ ಜವಾಬ್ದಾರಿ ವಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ
ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಧರ್ಮದರ್ಶಿ ಮಂಡಳಿ ಸದಸ್ಯರಾದ ಅಶೋಕ ಪ್ರಭು ಸುಳ್ಯ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಕೇರ್ಪಳ,ಮಂಡಳಿ ಕಾರ್ಯದರ್ಶಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ಧರ್ಮದರ್ಶಿ ಮಂಡಳಿ ಸದಸ್ಯರಾದ ಮಹಾಬಲ ಕೇರ್ಪಳ, ಭಾಸ್ಕರ ನಾಯರ್, ಗೋಪಾಲ ಎಸ್ ನಡುಬೈಲು, ವಾಸುದೇವ ನಾಯಕ್ ಹಾಗೂ ಸಮಿತಿಯ ಸದಸ್ಯರು ಭಾಗವಹಿಸಿದರು.