














ಫೆ.೪ರಂದು ಸುಳ್ಯದಲ್ಲಿ ದ.ಕ.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ನಿರ್ದೇಶಕ ವಿಷ್ಣು ಭಟ್ ಮೂಲೆತೋಟರವರಿಗೆ ಅಭಿನಂದನಾ ಕಾರ್ಯಕ್ರಮ ಸುಳ್ಯದ ಸಿಎ ಬ್ಯಾಂಕ್ ಸಭಾಂಗದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. ೩೧ರಂದು ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಅಭಿನಂದನಾ ಸಮಿತಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ವಿಕ್ರಂ ಅಡ್ಪಂಗಾಯ, ಪ್ರಧಾನ ಕಾರ್ಯದರ್ಶಿ ವಿನಯ್ ಮುಳುಗಾಡು, ಕೋಶಾಧಿಕಾರಿ ನೇಮಿರಾಜ್ ಪಲ್ಲೋಡಿ,ಸಂಚಾಲಕ ಬಾಲಕೃಷ್ಣ ಪಿ., ಸಹಕಾರ ಸಂಘಗಳ ವಲಯ ಮೇಲ್ವಿಚಾರಕರುಗಳಾದ ರತನ್ ಕಳಗಿ, ಪ್ರದೀಪ್‌ಕುಮಾರ್, ಮನೋಜ್ ಮಾಣಿಬೈಲು, ಸುಳ್ಯ ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಚಂದ್ರಪ್ರಕಾಶ್ ಕಂಬಳ, ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲ, ಪಂಬೆತ್ತಾಡಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿ, ಅರಂತೋಡು, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಕನಕಮಜಲು ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುದ್ಕುಳಿ ಉಪಸ್ಥಿತರಿದ್ದರು.









