ಸಾಂಸ್ಕೃತಿಕ ಕಾರ್ಯಕ್ರಮಗಳು















ಪಂಜ ಶ್ರೀ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವವು ಭಕ್ತಿ ಸಂಭ್ರಮದಿಂದ ಜ.31 ರಂದು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ಜರುಗಿತು .

ಪೂರ್ವಾಹ್ನ ಗಣಪತಿಹೋಮ, ಪಂಚ ವಿಂಶತಿ ಕಲಶಪೂಜೆ, ಸಾಮೂಹಿಕ ಆಶ್ಲೇಷಬಲಿ ಪೂಜೆ, ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ. ಭಜನೆ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.ರಾತ್ರಿ ಶ್ರೀ ದೇವರಿಗೆ ರಂಗಪೂಜೆ. ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳು :
ಸಂಜೆ ಶ್ರೀ ಚಾಮುಂಡೇಶ್ವರಿ ಕುಣಿತಾ ಭಜನಾ ತಂಡ ಪಲ್ಲೋಡಿ ಇವರಿಂದ ಕುಣಿತ ಭಜನೆ, ಕು| ಸುಮಾ ಕೋಟೆ, ಪಂಜ ಇವರಿಂದ ಭಕ್ತಿಭಾವ ಸಂಭ್ರಮ, ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಇದರ ಅಧ್ಯಯನ ಕೇಂದ್ರ ಕಲಾ ಕ್ಷೇತ್ರ ಪಂಜ ಇಲ್ಲಿನ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಪ್ರಸಂಗ ಕದಂಬ ಕೌಶಿಕೆ ಪ್ರದರ್ಶನ ಗೊಂಡಿತು. ದೇವಳದ ಆಡಳಿತಾಧಿಕಾರಿ ಜಯಂತ್ ಯು ಬಿ, ಪ್ರಧಾನ ಅರ್ಚಕ ವಿಷ್ಣು ಪೈಂದೋಡಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ಭವಾನಿ ಶಂಕರ ಪಾಲೋಳಿ, ಅಭಿವೃದ್ಧಿ ಸಮಿತಿ ನಿಕಟಪೂರ್ವಾಧ್ಯಕ್ಷ ಲೋಕೇಶ್ ಬರೆಮೇಲು, ಉತ್ಸವ ಸಮಿತಿಯ ಸಂಚಾಲಕರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.











