ಐವರ್ನಾಡು ಗ್ರಾಮ ಪಂಚಾಯತ್ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಫೆ.02 ರಂದು ದೇರಾಜೆ ಗೆಳೆಯರ ಬಳಗದ ಸಹಯೋಗದಲ್ಲಿ ನಡೆಯಿತು.
ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದವರೆಗೆ ನಡೆಯಿತು .


ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು ಐವರ್ನಾಡು ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಗೆಳೆಯರ ಬಳಗ ದೇರಾಜೆಯ ಅಧ್ಯಕ್ಷರು, ಸದಸ್ಯರುಗಳು ಹಾಗೂ ಊರಿನ ಪ್ರಮುಖರು, ಶ್ರೀ ಪಂಚಲಿಂಗೇಶ್ವರ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಗೆಳೆಯರ ಬಳಗ ದೇರಾಜೆಯವರು ಲಘು ಉಪಹಾರದ ವ್ಯವಸ್ಥೆ ಮಾಡಿದ್ದರು.