ಅರಂತೋಡು ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ಪೋಷಕರ ಸಭೆಯು ಫೆ. 01 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.















ಸಭೆಯನ್ನು ಸ್ಥಳೀಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು.

ಸದರ್ ನೌಶಾದ್ ಅಝ್ಹರಿ ಪ್ರಸ್ತಾವನೆ ಗೈದರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಬ್ದುಲ್ ಸಮದ್ ಮಾಸ್ತರ್ ಸಾಲೆತ್ತೂರು ಮಾತನಾಡಿ ಪೋಷಕರು ಮಕ್ಕಳಿಗೆ ಪುಸ್ತಕಗಳನ್ನು , ಪತ್ರಿಕೆಗಳನ್ನು ಕೊಂಡುಕೊಂಡು ಓದುವ ಚತವನ್ನು ಬೆಳೆಸಬೇಕೆಂದರು. ಮತ್ತು ಮಕ್ಕಳಲ್ಲಿ ಜ್ನಾನವನ್ನು ವೃದ್ಧಿಸಬೇಕೆಂದರು. ಸಮಾರಂಭದಲ್ಲಿ ಸಹಾಯಕ ಅಧ್ಯಾಪಕ ಅಬ್ದುಲ್ ರಹಿಮಾನ್ ಝಹರಿ, ಪ್ರಧಾನ ಕಾರ್ಯದರ್ಶಿ ಕೆ.ಎಮ್ ಮೂಸಾನ್, ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಅನ್ವಾರುಲ್ ಹುಧಾ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಂ ಅಬ್ದುಲ್ ಮಜೀದ್, ದಿಕ್ರ್ ಸ್ವಲಾತ್ ಮಜಿಲಿಸ್ ಅಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕುಂಬಳ, ಎಸ್.ಕೆ.ಎಸ್.ಎಸ್.ಎಫ್ ಶಾಕೆ ಅಧ್ಯಕ್ಷ ಜುಬೈರ್ ಎಸ್.ಇ ನಿವೃತ್ತ ಉಪನ್ಯಾಸಕ ಅಬ್ದುಲ್ ಮಾಸ್ತರ್, ತಾಜುದ್ಧೀನ್ ಅರಂತೋಡು ಮುಜೀಬ್, ಮೊಯಿದು ಕುಕ್ಕುಂಬಳ, ಅಬ್ದುಲ್ ಖಾದರ್ ಮೊಟ್ಟೆಂಗಾರ್, ಮೊದಲಾದವರು ಉಪಸ್ಥಿತರಿದ್ದರು. ಅಮೀರ್ ಕುಕ್ಕುಂಬಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.











