ಮೂರು ತಾಲೂಕು ಸೇರಿ ಬೃಹತ್ ಅಭಿನಂದನಾ ಸಮಾರಂಭ ನಡೆಸಲು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಲಹೆ

0

ನಾಳೆ ಸುಳ್ಯದಲ್ಲಿ ನಡೆಯಬೇಕಾಗಿದ್ದ ಶಶಿಕುಮಾರ್ ಬಾಲ್ಯೊಟ್ಟು ಅಭಿನಂದನಾ ಸಭೆ ರದ್ದು

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಶಿಕುಮಾರ್ ಬಾಲ್ಯೊಟ್ಟು ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಸದಸ್ಯರಾಗಿ ಆಯ್ಕೆಯಾಗಿರುವ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ರನ್ನು ಅಭಿನಂದಿಸಲು ನಾಳೆ ಸುಳ್ಯ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸುಳ್ಯ ತಾಲೂಕು ಮಟ್ಟದ ಸಮಾರಂಭವನ್ನು ರದ್ದುಗೊಳಿಸಲಾಗಿದೆ.

ಸುಳ್ಯ ತಾಲೂಕು ಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿತವಾಗಿರುವ ವಿಚಾರ ತಿಳಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ರವರು ” ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ಸಹಕಾರಿಗಳನ್ನು ಸೇರಿಸಿ, ಎಲ್ಲ ಶಾಸಕರುಗಳನ್ನು ಕರೆದು ದೊಡ್ಡ ಮಟ್ಟದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಿ. ನಾನೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ” ಎಂದು ಹೇಳಿದುದರಿಂದ ನಾಳೆಯ ಸುಳ್ಯದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಮೂರು ತಾಲೂಕುಗಳನ್ನು ಸೇರಿಸಿ ಮಾರ್ಚ್ 1 ರಂದು ಪುತ್ತೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿರುವುದಾಗಿ ಗೊತ್ತಾಗಿದೆ.