ಅಗಲಿದ ವೇಣುಗೋಪಾಲ ನಾರ್ಣಕಜೆಯವರಿಗೆ ನುಡಿನಮನ

0

ಸುಳ್ಯದ ಶ್ರೀ ಗುರು ರಾಘವೇಂದ್ರ ಮಠದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಯಾಗಿದ್ದ ವೇಣುಗೋಪಾಲ ನಾರ್ಣ ಕಜೆಯವರುನಿಧನರಾಗಿದ್ದು ಅವರ ಉತ್ತರ ಕ್ರಿಯಾಧಿ ಸದ್ಗತಿ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮ ಶ್ರೀ ಗುರು ರಾಘವೇಂದ್ರ ಮಠದ ಸಭಾಭವನದಲ್ಲಿ ಫೆ.5 ರಂದು ನಡೆಯಿತು.

ಮಠದ ಪುರೋಹಿತರಾದ ಶ್ರೀಹರಿ ಎಳಚಿತ್ತಾಯ ಹಾಗೂ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರು ಮೃತರ ಜೀವನಗಾಥೆಯ ಕುರಿತು ಗುಣಗಾನ ಮಾಡಿ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೃತರ ಮನೆಯವರು ಹಾಗೂ ಕುಟುಂಬಸ್ಥರು, ಬಂಧು ಮಿತ್ರರು ಮತ್ತು ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಕೋರಿದರು.