














ಮಾರಕ ರೋಗ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಫೆ. 4 ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವ ಕ್ಯಾನ್ಸರ್ ದಿನ 2025 – “ಯುನೈಟೆಡ್ ಬೈ ಯುನಿಕ್ ಕಾರ್ಯಕ್ರಮದಡಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದ ವತಿಯಿಂದ ಕ್ಯಾನ್ಸರ್ ದಿನದ ಕುರಿತಾದ ವಿಶೇಷ ಜಾಗೃತಿ ಮೂಡಿಸುವ ಕಾರ್ಯಕ್ರಮ ಫರ. 4ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ವಹಿಸಿ ಕ್ಯಾನ್ಸರ್ ರೋಗದ ಉಪಯುಕ್ತ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜಾನ್, ಜನರಲ್ ಸರ್ಜರಿ ವಿಭಾಗ ಮುಖ್ಯಸ್ಥ ಡಾ. ಗೋಪಿನಾಥ್ ಪೈ, ಅಸೋಸಿಯೇಟ್ ಪ್ರೊಫೆಸರ್ ಡಾ. ರಂಜಿತ್ ಕೆ.ಬಿ. ಉಪಸ್ಥಿತರಿದ್ದರು. ತಜ್ಞ ವೈದ್ಯರುಗಳು ಕ್ಯಾನ್ಸರ್ ಕುರಿತಾದ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಕ್ಯಾನ್ಸರ್ ಕುರಿತಾದ ಪ್ರಹಸನವನ್ನು ವೀಕ್ಷಿಸಿದರು.










